ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲು ಮಾಡುವಂತೆ ತಿಲಕನಗರ ಪೊಲೀಸರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಿದೆ.
ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಸಚಿವೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕರಿ ಸಂಘರ್ಷ ಪರಿಷತ್ ಆದರ್ಶ್ ಆರ್.ಐಯ್ಯರ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ವಿಚಾರಣೆ ನಡೆಸಿದ ನ್ಯಾಯಾಲಯ ವಿತ್ತ ಸಚಿವರು ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ ನೀಡಿದೆ.