alex Certify BIG NEWS: ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅದ್ದೂರಿ ದಸರಾ ಆಚರಣೆಗೆ ಸರ್ಕಾರ, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ದಸರಾ ಉದ್ಘಾಟನೆ, ಕಾರ್ಯಕ್ರಮಗಳು, ಜಂಬೂಸವಾರಿ ದಿನಾಂಕಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ. ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾಗೆ ಚಾಲನೆ ದೊರೆಯಲಿದೆ. ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ.

ಬಳಿಕ ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.

ಅಂದು ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್​ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಇನ್ನು ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ತೆರಳುತ್ತವೆ. ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಸಮೀಪ ಪಾರ್ಕಿಂಗ್ ವ್ಯವಸ್ಥೆ ಇದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024 ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಬಹುದು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...