HomeIndiaBREAKING NEWS: ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

BREAKING NEWS: ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

ಚೆನ್ನೈ: ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತಮಿಳುನಡಿನ ಕೂತನಹಳ್ಳಿಯಲ್ಲಿ ನಡೆದಿದೆ.

ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ ಟಾಟಾ ಫ್ಯಾಕ್ಟರಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿವೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು, ಸಿಬ್ಬಂದಿಗಳು ಹೊರಗೋಡಿಬಂದಿದ್ದಾರೆ. ದಟ್ಟ ಹೊಗೆಯಿಂದಾಗಿ ಕೆಲ ಮಹಿಳಾ ಸಿಬ್ಬಂದಿಗಳಿಗೆ ಉಸಿರಾಟದ ತೊಂದರೆ ಎದುರಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ರಾಯಕೋಟೆ, ಡಂಕನಿಕೋಟೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular