HomeEntertainment'ದೇವರ' ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ....?

‘ದೇವರ’ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ….?

ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ನಿನ್ನೆ ವಿಶ್ವಾದ್ಯಂತ  ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದೆ. ಈ ಚಿತ್ರಕ್ಕಾಗಿ ಜೂನಿಯರ್ ಎನ್ಟಿಆರ್ ಸಾಕಷ್ಟು ಪರಿಶ್ರಮ ಪಟ್ಟಿದ್ದು, ಸಾಹಸ ದೃಶ್ಯಗಳು ಪ್ರೇಕ್ಷಕರ ಗಮನ ಸೆಳೆದಿವೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ದೇವರ  ಸಿನಿಮಾ  ಮೊದಲನೇ ದಿನವೇ 172 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ  ಬಹಿರಂಗಪಡಿಸಿದೆ.

ಕೊರಟಾಲ ಶಿವ ನಿರ್ದೇಶನದ ಈ ಚಿತ್ರವನ್ನು ಯುವ ಸುಧಾ ಆರ್ಟ್ಸ್ ಹಾಗೂ ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಂದಮೂರಿ ಕಲ್ಯಾಣ್ ರಾಮ್, ನಿರ್ಮಾಣ ಮಾಡಿದ್ದು, ಜೂನಿಯರ್ ಎನ್ಟಿಆರ್ ಸೇರಿದಂತೆ ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ನರೇನ್, ಕಲೈಯರಸನ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್, ಬಣ್ಣ ಹಚ್ಚಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಾಹಣವಿದೆ. ಅನಿರುದ್ಧ ರವಿಚಂದರ್  ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular