HomeEntertainment'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಮಹಾ ಸಂಚಿಕೆಗೆ ಆಗಮಿಸಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಮಹಾ ಸಂಚಿಕೆಗೆ ಆಗಮಿಸಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ui ಚಿತ್ರ ಇನ್ನೇನು ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏಳು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನದಲ್ಲಿ ಸಿನಿಮಾ  ಮೂಡಿ ಬರುತ್ತಿದ್ದು, ಮತ್ತೊಮ್ಮೆ ತಲೆಯಲ್ಲಿ ಹುಳ ಬಿಡಲು ಸಜ್ಜಾಗಿದ್ದಾರೆ.

ಕಲರ್ಸ್ ಕನ್ನಡ ಅನುಬಂಧ ಅವಾರ್ಡ್ ನಲ್ಲಿ ಇತ್ತೀಚಿಗಷ್ಟೇ ಕಾಣಿಸಿಕೊಂಡಿದ್ದ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಜೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡ್ಯಾನ್ಸ್ ಮಹಾ ಸಂಚಿಕೆಗೆ ಆಗಮಿಸಲಿದ್ದಾರೆ. ಈ ಕುರಿತು ಜಿ ಕನ್ನಡ ವಾಹಿನಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದೆ. ‘UI’ ಚಿತ್ರದ ಟೀಸರ್ ಅನ್ನು ಜೀ ಕನ್ನಡ ವೇದಿಕೆಯಲ್ಲಿ ತೋರಿಸಲಿದ್ದು, ಸ್ಪರ್ಧಿಗಳು ರಿಯಲ್ ಸ್ಟಾರ್ ಉಪೇಂದ್ರ ಅವರ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಭಾನುವಾರ ಸಂಜೆ ಏಳರಿಂದ 11-00 ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ಒಂದೇ ವೇದಿಕೆಯಲ್ಲಿ ನೋಡಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular