HomeKarnatakaBREAKING NEWS: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ FIR ದಾಖಲು

BREAKING NEWS: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ FIR ದಾಖಲು

ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಆದರ್ಶ್ ಅಯ್ಯರ್ ಎಂಬುವವರು ನೀಡಿರುವ ದೂರಿನ ಮೇರೆಗೆ ಎಫ್ಐಆಆರ್ ದಾಖಲಿಸಲಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್, ಬಿ.ವೈ.ವಿಜಯೇಂದ್ರ, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣ ಸಂಬಂಧ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಿತ್ತು.

For Latest News Updates, Join Our Whatsapp Community🚩
RELATED ARTICLES

Most Popular