ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಮುಖ ಆರೋಪಿಯಾಗಿದ್ದು, ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಆದರ್ಶ್ ಅಯ್ಯರ್ ಎಂಬುವವರು ನೀಡಿರುವ ದೂರಿನ ಮೇರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್, ಬಿ.ವೈ.ವಿಜಯೇಂದ್ರ, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆಆರ್ ದಾಖಲಿಸಲಾಗಿದೆ.
ಎಫ್ಐಆರ್ ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀಆರಾಮನ್ A1, ಇಡಿ A2, ಕೇಂದ್ರ ಬಿಜೆಪಿ ಪದಾಧಿಕಾರಿಗಳು A3, ನಳೀನ್ ಕುಮಾರ್ ಕಟೀಲ್ A4, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ A5 ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳು A6 ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣ ಸಂಬಂಧ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಿತ್ತು.