alex Certify ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಹಲವು ಕಡೆ ಭಾನುವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಭಾರೀ ಆಗುವ ಸಂಭವ ಇದೆ.

ಹಾಸನ, ಮೈಸೂರು, ಕೊಡಗು, ಚಿತ್ರದುರ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾನುವಾರ ಮತ್ತು ಸೋಮವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಆಗುವ ಸಂಭವ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...