HomeKarnatakaBIG NEWS: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

BIG NEWS: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರೆದಿದೆ. ಶಂಕಿತ ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ.

5 ವರ್ಷದ ಪ್ರದೀಪ್ ಆಚಾರಿ ಮೃತ ಬಾಲಕ. ಕಳೆದ ಒಂದು ವಾರದಲ್ಲಿ ಸಿದ್ದಮ್ಮನ ಹಳ್ಳಿಯಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಪ್ರತಿದಿನ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ.

ಈ ನಡುವೆ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಪ್ರದೀಪ್ ಸಾವನ್ನಪ್ಪಿದ್ದು, ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮದಲ್ಲಿ ಡೆಂಗ್ಯೂ ಸೋಂಕು ಹೆಚ್ಚಾಗುತ್ತಿದ್ದರೂ ಪಂಚಾಯಿತಿ ಅಧಿಕಾರಿಗಳು ಫಾಗಿಂಗ್ ಮಾಡುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular