HomeKarnatakaSHOCKING NEWS: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕದ್ದು ಎಸ್ಕೇಪ್ ಆದ ಖದೀಮರು

SHOCKING NEWS: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕದ್ದು ಎಸ್ಕೇಪ್ ಆದ ಖದೀಮರು

ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದ ಕಳ್ಳರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ.

ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೂದು ಬಣ್ಣದ ಟೊಯೊಟಾ ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು, ಮಂಕಿ ಕ್ಯಾಪ್ ಹಾಕಿಕೊಂಡು ಬಂದು ಆಕಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಹಸು ಕದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಕಾರನ್ನು ಅಡ್ಡಗಟ್ಟಲು ಮುಂದಾಗಿದ್ದಾರೆ. ಈ ವೇಳೆ ಖದೀಮರು ಜನರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾರೆ. ಇದರಿಂದ ಜೀವ ಭಯದಲ್ಲಿ ಸ್ಥಳೀಯರು ಹಿಂದೆಸರಿದಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಸ್ಥಳೀಯರು ದೂರು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇತ್ತೀಚೆಗೆ ಹಸು ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular