alex Certify 34 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

34 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್

ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು,  ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದಾರೆ.

2015 ರಲ್ಲಿ ತೆರೆಕಂಡ ವಿನಯ್ ಗೋವಿಂದ್ ನಿರ್ದೇಶನದ ‘ಕೊಹಿನೂರ್’ ಎಂಬ ಮಲಯಾಳಂ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು 2016ರಲ್ಲಿ ಕನ್ನಡದಲ್ಲಿ ಪವನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ‘ಯುಟರ್ನ್’ ನಲ್ಲಿ ತೆರೆ ಹಂಚಿಕೊಂಡರು.

2016 ರಲ್ಲಿ ‘ಕಾಟ್ರು ವೆಲಿಯಿದೈ’ ಚಿತ್ರದಲ್ಲಿ ಅತಿಥಿ ಪಾತ್ರ  ಒಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಟಿ ಶ್ರದ್ಧಾ ಶ್ರೀನಾಥ್ ಕನ್ನಡದಲ್ಲಿ ‘ಉರ್ವಿ’  ‘ಆಪರೇಷನ್ ಅಲಮೇಲಮ್ಮ’  ರುಸ್ತುಮ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡರು.

ಶ್ರದ್ಧಾ ಶ್ರೀನಾಥ್ ಇತ್ತೀಚಿಗೆ  ಅಭಿನಯಿಸಿರುವ ‘ಮೆಕ್ಯಾನಿಕ್ ರಾಕಿ’ ‘ಕಲಿಯುಗಂ’ ‘ಲೆಟರ್ಸ್ ಟು ಮಿಸ್ಟರ್ ಖನ್ನ’, ಹಾಗೂ ‘ಆರ್ಯನ್’ ಚಿತ್ರದ  ಶೂಟಿಂಗ್ ಕಂಪ್ಲೀಟ್ ಆಗಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...