HomeKarnatakaBIG NEWS: ಬಿಜೆಪಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರ: ಇಂತಹ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ:...

BIG NEWS: ಬಿಜೆಪಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರ: ಇಂತಹ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಆರಂಭವಾಗಿದ್ದು, ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಕೆಲ ನಾಯಕರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಯತ್ನಾಳ್ ಸೇರಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರವಾಗಿ ಇಂತಹ ಸಭೆ ನಮಗೆ ಹೊಸದೇನಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವಧಿಯಲ್ಲಿ ಅನೇಕ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ. ಇಂತಹ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular