ದಿನಕರ್ ಎಸ್ ನಿರ್ದೇಶನದ ವಿರಾಟ್ ಅಭಿನಯದ ‘ರಾಯಲ್’ ಚಿತ್ರದ ‘ಟಾಂಗ್ ಟಾಂಗ್ ಕೊಡ್ತಿಯಲ್ಲೆ’ ಎಂಬ ಹಾಡು ಇದೇ ಅಕ್ಟೋಬರ್ ಐದರಂದು ಸರಿಗಮ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಅನುರಾಗ್ ಕುಲಕರ್ಣಿ ಈ ಹಾಡಿಗೆ ಧ್ವನಿಯಾಗಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.
ಈ ಚಿತ್ರದಲ್ಲಿ ವಿರಾಟ್ ಗೆ ಜೋಡಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದು, ರಘು ಮುಖರ್ಜಿ, ಛಾಯಾ ಸಿಂಗ್, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ರವಿ ಭಟ್, ಗೋಪಾಲ್ ದೇಶಪಾಂಡೆ, ಅಭಿಲಾಷ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಜಯಣ್ಣ ಫಿಲಂಸ್ ಬ್ಯಾನರ್ ನಲ್ಲಿ ಜಯಣ್ಣ ಭೋಗೇಂದ್ರ ನಿರ್ಮಾಣ ಮಾಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಡಾ. ಕೆ.ರವಿ ವರ್ಮ ಸಾಹಸ ನಿರ್ದೇಶನ, ಹಾಗೂ ಸಂಕೇತ್ ಎಂವೈಎಸ್ ಛಾಯಾಗ್ರಹಣವಿದೆ.