ಬೆಂಗಳೂರು : ಮಾರ್ಚ್, ಏಪ್ರಿಲ್ ನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಹಲವು ಅನಿರೀಕ್ಷಿತ ಘಟನೆಗಳು ನಡೆಯತ್ತಿರುವ ಬೆನ್ನಲ್ಲೇ ಶಾಸಕ ಸುರೇಶ್ ಗೌಡ ಹೇಳಿಕೆ ಮಹತ್ವದ ಪಡೆದಿದೆ’.
ಮಾರ್ಚ್, ಏಪ್ರಿಲ್ ನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಡಿಸೆಂಬರ್ ನಲ್ಲಿ ಕಾಂಗ್ರೆಸ್ ನವರೇ ಸಿದ್ದರಾಮಯ್ಯರನ್ನು ಕೆಳಗಿಳಿಸುತ್ತಾರೆ. ಡಿಸೆಂಬರ್ ನಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಹಾಗಾಗಿ ಮಾರ್ಚ್, ಏಪ್ರಿಲ್ ನಲ್ಲಿ ರಾಜ್ಯ ವಿಧಾನಸಭೆಗೆ ‘ಚುನಾವಣೆ’ ನಡೆಯಬಹುದು ಎಂದು ಸುರೇಶ್ ಗೌಡ ಹೇಳಿದ್ದಾರೆ.