ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದಾರೆ.
ಐಪಿಸಿ ಕೆಲ ಸೆಕ್ಷನ್ ಗಳಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದಾರೆ. ಅಕ್ರಮವೆಂದು ಕಂಡು ಬಂದರೆ ಸಿಎಂ ಸಿದ್ದರಾಮಯ್ಯ ನಿವೇಶನ ಜಪ್ತಿ ಮಾಡುವ ಸಾಧ್ಯತೆಯಿದೆ. ಜಾರ್ಖಂಡ್ ಮಾದರಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸುವ ಸಾಧ್ಯತೆಯಿದೆ.ಲೋಕಾಯುಕ್ತ ತನಿಖೆ ಜೊತೆಗೆ ಸಿದ್ದರಾಮಯ್ಯ ಗೆ ಡಬಲ್ ಟೆನ್ಷನ್ ಶುರುವಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಕಳೆದ ವಾರ ಎಫ್ಐಆರ್ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ.