ಬೆಂಗಳೂರು : ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿದ್ದು, ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್ಸೈಟ್ನಲ್ಲಿ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿಸಿರುವ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ನಲ್ಲಿ ದಿನಾಂಕ 02.10.2024 ಸಂಜೆ 5.00 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆಗಳ ವಿವರಗಳನ್ನು ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಆಕ್ಷೇಪಣೆಗೆ ರೂ. 50 ನ್ನು ಪಾವತಿಸತಕ್ಕದ್ದು ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ಹೊರಡಿಸಲಾಗಿದೆ.
• ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
• – ಮುಖಪುಟದಲ್ಲಿ ‘ಇತ್ತೀಚಿನ ಪ್ರಕಟಣೆಗಳು’ ಮೆsನು ಅಡಿ ಗಮನಿಸಿ.
• – GTTC – ಕಡ್ಡಾಯ ಕನ್ನಡ ಕೀ ಉತ್ತರ / VAO ಕಡ್ಡಾಯ ಕನ್ನಡ ಕೀ ಉತ್ತರ ಎಂದಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
• – ಪಿಡಿಎಫ್ ಫೈಲ್ಗಳು ತೆರೆಯುತ್ತದೆ
• – ನಿಮ್ಮ ಪತ್ರಿಕೆ ಕೋಡ್ ನಂಬರ್ ಪ್ರಕಾರ, ಪ್ರಶ್ನೆಗಳ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಿ.