HomeKarnatakaBIG NEWS: ಸೈಟ್ ವಾಪಸ್ ಕೊಟ್ಟು ಅಕ್ರಮವಾಗಿರುವುದನ್ನು ಒಪ್ಪಿಕೊಂಡಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

BIG NEWS: ಸೈಟ್ ವಾಪಸ್ ಕೊಟ್ಟು ಅಕ್ರಮವಾಗಿರುವುದನ್ನು ಒಪ್ಪಿಕೊಂಡಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

 

ಹುಬ್ಬಳ್ಳಿ: ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿದ್ದಾರೆ. ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ತನಿಖೆ ನಡೆದಿದೆ. ಈಗ ಸೈಟ್ ವಾಪಾಸ್ ಕೊಟ್ಟಿರುವುದರಿಂದ ತಪ್ಪು ಒಪ್ಪಿಕೊಂಡಂತಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಫ್ಐಆರ್ ಆದಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್ ಐ ಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಮೊದಲು ಕಾಂಗ್ರೆಸ್ ನಾಯಕರು ತಪ್ಪೇ ನಡೆದಿಲ್ಲ ಅನ್ನುತ್ತಿದ್ದರು. ಈಗ ಸೈಟ್ ವಾಪಸ್ ಕೊಟ್ಟು ಅಕ್ರಮವಾಗಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂದರು.

ಈ ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು? ಯಡಿಯೂರಪ್ಪ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಅಂತ ಹೇಳಿದ್ದರು. ಈಗ ಇದೇ ಮಾತು ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ ಎಂದು ಟಾಂಗ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular