ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 16ನೇ ಸಂಸ್ಥಾಪನಾ ದಿನಾಚರಣೆಯನ್ನು 22ನೇ ನವೆಂಬರ್ 2024 ರಂದು ರಾಯಚೂರು ಮುಖ್ಯ ಆವರಣದಲ್ಲಿ ಆಯೋಜಿಸಲಾಗುವುದು. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರಿಗೆ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಇದರ ಪ್ರಯುಕ್ತ ಅರ್ಜಿ ನಮೂನೆಯನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವೆಬ್ ಸೈಟ್ https://uasraichur.karnataka.gov.in ನಲ್ಲಿ ಪಡೆದುಕೊಳ್ಳಬಹುದು.ಭರ್ತಿ ಮಾಡಿದ ಅರ್ಜಿಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರಗಳ ಮುಖ್ಯಸ್ಥರಿಗೆ ಅಥವಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳ ಮುಖ್ಯಸ್ಥರ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಹಗರಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಅಥವಾ ಮೊ.9480696314, 9480696315, 9480696316, 9480696317, 9480696318 ಗೆ ಸಂಪರ್ಕಿಸಬಹುದು ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.