HomeKarnatakaNMMS ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

NMMS ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.

2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 30.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:05.10.2024 ರವರೆಗೆ ವಿಸ್ತರಿಸಲಾಗಿದೆ.

ಈ ಸಂಬಂಧ ಉಪನಿರ್ದೇಶಕರು(ಆಡಳಿತ), ಉಪನಿರ್ದೇಶಕರು(ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು ಎಂದು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular