BREAKING : ಎಚ್ಚರಿಕೆಯಿಂದ ಇರುವಂತೆ ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಸೂಚನೆ

ಹಮಾಸ್ ಹಾಗೂ ಹೆಜ್ಬೊಲ್ಲಾ ಉಗ್ರರ ಹುಟ್ಟಡಗಿಸುವ ನಿಟ್ಟಿನಲ್ಲಿ ಅವರ ನೆಲೆಗಳ ಮೇಲೆ ಹಾಗೂ ನಿರಂತರ ದಾಳಿ ಮಾಡುತ್ತಿರುವ ಇಸ್ರೇಲ್ ನ ಮೇಲೆ ಇಸ್ಲಾಂ ರಾಷ್ಟ್ರಗಳು ಮುಗಿಬಿದ್ದಿದೆ.

ಇಸ್ರೇಲ್ ಮೇಲೆ ದಾಳಿ ನಡೆಸುತ್ತಿರುವ ಹಿನ್ನೆಲೆ ಇಸ್ರೇಲ್ ನಲ್ಲಿರುವ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ರಾಯಭಾರಿ ಕಚೇರಿ ಸೂಚನೆ ನೀಡಿದೆ.

ಇಸ್ರೇಲ್ ನ ಸೇನಾ ನೆಲೆಗಳು ಮತ್ತು ಗುಪ್ತಚರ ಸಂಸ್ಥೆ ಮೊಸಾದ್ ಕಚೇರಿ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪೂರ್ಣ ಪ್ರಮಾಣದ ಯುದ್ಧದ ಸ್ವರೂಪ ಪಡೆಯುವ ಲಕ್ಷಣಗಳು ಕಂಡುಬಂದಿದೆ. ಮನಬಂದಂತೆ ಗುಂಡಿನ ದಾಳಿ ನಡೆಸಿದ ಹಿನ್ನೆಲೆ 9 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read