alex Certify BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೂರು ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೇರಳ ಮತ್ತು ಕೊಡಗು ಮೂಲದ 7 ಪೆಡ್ಲರ್ ಗಳನ್ನು ಬಂಧಿಸಲಾಗಿದೆ.

ಕೊಡಗು ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್ ನಿಂದ ತರಲಾಗಿದ್ದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕೊಡಗಿಗೆ ಹೈಡ್ರೋ ಗಾಂಜಾ ತಂದಿದ್ದು, ಮಡಿಕೇರಿ ನಗರದ ವಿರಾಜಪೇಟೆ ರಸ್ತೆಯ ಬಳಿ ಆರೋಪಿಗಳನ್ನು ಬಂಧಿಸಿ ಗಾಂಜಾ ಜಪ್ತಿ ಮಾಡಲಾಗಿದೆ.

ಮೆಹರೂಫ್, ರವೂಫ್, ನಾಸಿರುದ್ದೀನ್, ವಾಜೀದ್, ರಿಯಾಜ್, ಯಾಯಿಯಾ, ಅಕಾನಸ್ ನನ್ನು ಬಂಧಿಸಲಾಗಿದೆ.

ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...