alex Certify ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನ

ಬೆಂಗಳೂರು: 2024-25ನೇ ಸಾಲಿನ NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ.

2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 30.09.2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:05.10.2024 ರವರೆಗೆ ವಿಸ್ತರಿಸಲಾಗಿದೆ.

ಈ ಸಂಬಂಧ ಉಪನಿರ್ದೇಶಕರು(ಆಡಳಿತ), ಉಪನಿರ್ದೇಶಕರು(ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು ಎಂದು ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...