alex Certify BREAKING : H.D ಕುಮಾರಸ್ವಾಮಿಗೆ ಸಂಕಷ್ಟ : ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ‘NCR’ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : H.D ಕುಮಾರಸ್ವಾಮಿಗೆ ಸಂಕಷ್ಟ : ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ‘NCR’ ದಾಖಲು..!

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.

50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬುವವರು ದೂರು ನೀಡಿದ್ದರು.

2019 ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ತಕ್ಷಣಕ್ಕೆ 50 ಕೋಟಿ ಹಣ ನೀಡುವಂತೆ ಒತ್ತಾಯಿಸಿದ್ದರು. ಹಣ ಕೊಡಲು ನಿರಾಕರಿಸಿದ ಹಿನ್ನೆಲೆ ನನ್ನ ಉದ್ಯಮ ಹಾಗೂ ನನ್ನ ಜೀವಕ್ಕೆ ಸಂಚಕಾರ ತರುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ವಿಜಯ್ ಟಾಟಾ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...