ಅ. 4ರಿಂದ 7 ರ ವರೆಗೆ ಮೆಸ್ಕಾಂ ಸೇರಿ ಎಸ್ಕಾಂಗಳ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯನ್ನು ಕೈಗೊಳ್ಳಲಾಗಿದೆ.
ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆಪ್ ಇತ್ಯಾದಿ ಸೇವೆಯು ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು, ಇತರೆ ನಗರ ಪ್ರದೇಶಗಳ ಗ್ರಾಹಕರಿಗೆ ಸೇವೆ ಲಭ್ಯವಿರುವುದಿಲ್ಲ.
ತಂತ್ರಾಂಶವು ಕಾರ್ಯಾರಂಭಗೊAಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.