HomeKarnatakaದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು, ಹಣ ದೊರೆತ ನಂತರ ಭರ್ಜರಿಯಾಗಿ ಹೋಳಿಗೆ ಊಟ ಮಾಡಿರಿ. ಅದೇ ನನಗೆ ಸಂತೋಷ ಎಂದು ಸಚಿವೆ ತಿಳಿಸಿದ್ದಾರೆ.

ಮೂಡಲಗಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣ ಪಾವತಿಯಾಗಲಿದೆ. ಜುಲೈ, ಆಗಸ್ಟ್ ತಿಂಗಳ ಹಣ ತಾಂತ್ರಿಕ ಕಾರಣದಿಂದ ಖಾತೆಗೆ ಜಮಾ ಆಗಿರಲಿಲ್ಲ. ಅ. 7 ಮತ್ತು 9ರಂದು ಎರಡು ಕಂತಿನಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular