HomeKarnatakaರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: 'ವಿದ್ಯಾನಿಧಿ' ಯೋಜನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ‘ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಮೂಲಕ ಚಾಲಕರು ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ವೆಬ್ಸೈಟ್ https://sevasindhu.karnataka.gov.in/Sevasindhu/Kannada ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular