HomeKarnatakaಮಾಜಿ ಶಾಸಕನಿಂದ ಕಿರುಕುಳ ಆರೋಪ: ಮಕ್ಕಳೊಂದಿಗೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಮಾಜಿ ಶಾಸಕನಿಂದ ಕಿರುಕುಳ ಆರೋಪ: ಮಕ್ಕಳೊಂದಿಗೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಹೊರವಲಯದ ಚೆನ್ನಮುಂಬಾಪುರದಲ್ಲಿ ನಡೆದಿದೆ.

35 ವರ್ಷದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದವರು. ಅವರು ವಿಷ ಸೇವನೆಗೆ ಮೊದಲು ಮಾಜಿ ಶಾಸಕರು ಮತ್ತು ಅವರ ಪತ್ನಿ ಸೇರಿದಂತೆ ಹಲವರ ಹೆಸರುಗಳನ್ನು ಡೆತ್ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪದೇಪದೇ ಮನೆಗೆ ನುಗ್ಗಿ ಗಲಾಟೆ ಮಾಡುತ್ತಿದ್ದರಿಂದ ಮನನೊಂದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಮಹಾಲಕ್ಷ್ಮಿ ಮತ್ತು ಮಕ್ಕಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular