ಬೆಂಗಳೂರು : ಬೆಂಗಳೂರಿನಲ್ಲಿ ಇಡಿ ದಾಳಿ ಮುಂದುವರೆದಿದ್ದು, ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೆಹಲಿಯ ಇಡಿ ಅಧಿಕಾರಿಗಳ ತಂಡ ಬೆಂಗಳೂರಿನ ಹಲವು ಕಡೆ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
5 ಕಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.