ಬೆಂಗಳೂರು : ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯರಿಗೆ ನವರಾತ್ರಿ ಗಿಫ್ಟ್ ಎಂಬಂತೆ ಅ.7,9 ರಂದು ಖಾತೆಗೆ 2 ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಿದೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ ಅ.7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.
ಐಟಿ ಮತ್ತು ಜಿಎಸ್ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿಬಹುದಾಗಿದೆ.