alex Certify BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ.

ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ (56) ಹಾಗೂ ಖಂಡೋಬಾ (60) ಮೃತರು. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇಬ್ಬರು ಬೈಕ್ ಸವಾರರ ಸಾವಿನಿಂದ ಉದ್ರಿಕ್ತಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ವಾಹನಗಳು ಸಾಲು ಸಾಲಾಗಿ ನಿಂತ ಘಟನೆ ನಡೆದಿದೆ.

ಸ್ಥಳಕ್ಕೆ ಮನಗೂಳಿ ಪೊಲೀಸರು ಆಗಮಿಸಿದ್ದು, ಪ್ರತಿಭಟನಾ ನಿರತರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದಾಗ್ಯೂ ಒಪ್ಪದ ಗ್ರಾಮಸ್ಥರು ಪ್ರತಿಭಟನೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...