HomeKarnatakaBIG NEWS: ಬೆಂಗಳೂರಿನಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ

BIG NEWS: ಬೆಂಗಳೂರಿನಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಜಿಗಣಿಯಲ್ಲಿ ಪಾಕ್ ಪ್ರಜೆ ಸೇರಿದಂತೆ ನಾಲ್ವರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಿನ ಪೀಣ್ಯದಲ್ಲಿ ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಲಾಗಿದೆ.

ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಜಿಗಣಿ ಪೊಲೀಸರು ಪೀಣ್ಯದಲ್ಲಿ ಬಂಧಿಸಿದ್ದಾರೆ. ಜಿಗಣಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕ್ ಪ್ರಜೆ ರಶೀದ್ ಅಲ್ ಸಿದ್ದಕಿಯೊಂದಿಗೆ ಸಂಪರ್ಕದ ಜಾಡು ಹಿಡಿದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಹೆಚ್ಚಿನ ತನಿಖೆಗಾಗಿ ಈಗಾಗಲೇ ಪೊಲೀಸರ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular