alex Certify BIG NEWS: ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ಮೋದಿ ಸರ್ಕಾರದಿಂದ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ಮೋದಿ ಸರ್ಕಾರದಿಂದ ಮುಹೂರ್ತ ಫಿಕ್ಸ್

ನಾಗಪುರ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತರುವ ಮೂಲಕ ಮುಸ್ಲಿಂ ಸಮುದಾಯದೊಳಗಿನ ಅಂಚಿನಲ್ಲಿರುವ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದರು.

ಅವರು ಇಂದು ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಾಯ್ದೆಯ ಹಿಂದಿನ ಉದ್ದೇಶವನ್ನು ವಿವರಿಸಿದ ಸಚಿವರು, ಬೆರಳೆಣಿಕೆಯಷ್ಟು ಶ್ರೀಮಂತ ಮುಸ್ಲಿಮರು ವಕ್ಫ್‌ ನಲ್ಲಿರುವ ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಮುಸ್ಲಿಂ ಸಮುದಾಯದ ಇತರ ಅಂಚಿನಲ್ಲಿರುವ ವರ್ಗಗಳನ್ನು ಈ ಆಸ್ತಿಗಳ ಪ್ರಯೋಜನಗಳಿಂದ ವಂಚಿತರನ್ನಾಗಿ ಮಾಡಿದ್ದಾರೆ. ಸರ್ಕಾರದ ಅಧೀನದಲ್ಲಿರುವ ಜಮೀನುಗಳ ರಕ್ಷಣೆಗೆ ನಾಂದಿ ಹಾಡುವ ಈ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸರ್ಕಾರ ಅಂತಹ ಸಮುದಾಯಗಳಿಗೆ ನ್ಯಾಯ ಒದಗಿಸಲಿದೆ ಎಂದು ಹೇಳಿದರು.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ಜನಾಂಗೀಯ ಸಮುದಾಯಗಳ ನಡುವೆ ಮತ್ತು ಇದು ಕೇಂದ್ರ ಸರ್ಕಾರದ ವಿರುದ್ಧವಲ್ಲ. ಕೇಂದ್ರ ಸರ್ಕಾರ ಪರಿಹಾರ ಕಂಡುಕೊಳ್ಳಲಿದೆ. ಆದರೆ ಈ ಹಿಂಸಾಚಾರವನ್ನು ತಡೆಯಲು ಸೇನಾ ಕ್ರಮವೇ ಅಂತಿಮ ಪರಿಹಾರವಲ್ಲ ಎಂದು ವಿವರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...