HomeKarnatakaಸರ್ಕಾರಿ ನೌಕರರ ಸಂಘದ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ನಗರ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ರಾಜ್ಯ ಸರ್ಕಾರ ನೌಕರರ ಸಂಘದ ಚುನಾವಣೆ ಪ್ರಕ್ರಿಯೆ ಮುಂದುವರೆಯಲಿದೆ ಎಂದು ರಾಜ್ಯ ಚುನಾವಣಾ ಅಧಿಕಾರಿ ಹನುಮನರಸಯ್ಯ ತಿಳಿಸಿದ್ದಾರೆ.

ಸೆಪ್ಟೆಂಬರ್ 17ರಿಂದ ನೌಕರರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಚುನಾವಣೆ ಕಣದಲ್ಲಿ ಇರುವವರ ಪಟ್ಟಿ, ಅವಿರೋಧ ಆಯ್ಕೆಯಾದವರ ಪಟ್ಟಿ ಪ್ರಕಟಣೆ ಸೇರಿದಂತೆ ಅನೇಕ ಪ್ರಕ್ರಿಯೆಗಳು ನಡೆದಿದ್ದು, ಈ ನಡುವೆ ದ್ವಿತೀಯ ದರ್ಜೆ ಸಹಾಯಕ ಕೃಷ್ಣಯ್ಯ ನ್ಯಾಯಾಲಯದಲ್ಲಿ ದಾವೆ ಹೂಡಿ ನಿವೃತ್ತ ಉಪ ಕಾರ್ಯದರ್ಶಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿರುವುದು ಬೈಲಾಕ್ಕೆ ವಿರುದ್ಧವಾಗಿದೆ. ಹೀಗಾಗಿ ಚುನಾವಣೆಗೆ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದ್ದರು. ಸಂಘಕ್ಕೆ ನೋಟಿಸ್ ನೀಡದೆ ನ್ಯಾಯಾಲಯ ಏಕಪಕ್ಷೀಯವಾಗಿ ತಡೆಯಾಜ್ಞೆ ನೀಡಿದ್ದು, ಇದನ್ನು ಹೈಕೋರ್ಟ್ ತೆರವುಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular