alex Certify BREAKING : ಅತ್ಯಾಚಾರ ಆರೋಪ ಪ್ರಕರಣ : ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ |MLA Munirathna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅತ್ಯಾಚಾರ ಆರೋಪ ಪ್ರಕರಣ : ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ |MLA Munirathna

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನರನ್ನು ಎಸ್ ಐ ಟಿ ವಶಕ್ಕೆ ನೀಡಲಾಗಿತ್ತು. ಇಂದು ಎಸ್ ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದರ ನಡುವೆ ಅವರು ಜಾಮೀನಿಗೆ ಕೂಡ ಅರ್ಜಿ ಸಲ್ಲಿಸಿದ್ದರು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...