HomeKarnatakaBIG NEWS: ಆನೆಗಳ ಹಾವಳಿ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾಡಿನ ಅಂಚಿನಲ್ಲಿ ರೈಲು ಕಂಬಿ ಬ್ಯಾರಿಕೇಡ್

BIG NEWS: ಆನೆಗಳ ಹಾವಳಿ ನಿಯಂತ್ರಣಕ್ಕೆ ಮಹತ್ವದ ಕ್ರಮ: ಕಾಡಿನ ಅಂಚಿನಲ್ಲಿ ರೈಲು ಕಂಬಿ ಬ್ಯಾರಿಕೇಡ್

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ

ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular