alex Certify ಅಯ್ಯಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈನ್ ಬುಕಿಂಗ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯ್ಯಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈನ್ ಬುಕಿಂಗ್ ಕಡ್ಡಾಯ

ತಿರುವನಂತಪುರ: ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈನ್ ಬುಕಿಂಗ್ ಕಡ್ಡಾಯ ಮಾಡಲಾಗಿದೆ. ಪ್ರತಿದಿನ 80,000 ಭಕ್ತರಿಗೆ ಅವಕಾಶ ಇರುತ್ತದೆ. ನೂಕುನುಗ್ಗಲು ತಡೆಯಲು ಕೇರಳ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಪ್ರಸಿದ್ಧ ಶಬರಿಮಲೆ ದೇವಾಲಯದ ವಾರ್ಷಿಕ ಮಂಡಲಂ ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವರ್ಷ ಆನ್ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧಾರ ಕೈಗೊಂಡಿದೆ.

ಕಳೆದ ವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸಿದ್ದರಿಂದ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಭಾರಿ ಅವ್ಯವಸ್ಥೆ ಉಂಟಾಗಿತ್ತು. ಭಕ್ತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಭಕ್ತರ ನಿರ್ವಹಣೆ ಸಮರ್ಪಕವಾಗಿಸುವ ನಿಟ್ಟಿನಲ್ಲಿ ಆನ್ಲೈನ್ ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...