alex Certify ನಿಶ್ಚಿತಾರ್ಥವಾಗಿದ್ದ ಯುವತಿ ಮನೆಯಲ್ಲೇ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ಚಿತಾರ್ಥವಾಗಿದ್ದ ಯುವತಿ ಮನೆಯಲ್ಲೇ ಶವವಾಗಿ ಪತ್ತೆ

ಮೈಸೂರು: ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿಯಲ್ಲಿ ಘಟನೆ ನಡೆದಿದೆ.

ಗ್ರಾಮದ ಪುಟ್ಟಸ್ವಾಮಪ್ಪನವರ ಪುತ್ರಿ ಕವಿತಾ(20) ಶವವಾಗಿ ಪತ್ತೆಯಾಗಿದ್ದಾರೆ. ಯುವತಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಜಗ ಎಂಬಾತನಿಂದಲೇ ಕೊಲೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮೂರು ತಿಂಗಳ ಹಿಂದೆ ನಿಶ್ಚಿತಾರ್ಥದ ನಂತರ ಯುವತಿ ಮನೆಯಲ್ಲೇ ಜಗ ಹೆಚ್ಚು ಕಾಲ ಇರುತ್ತಿದ್ದ.

ಯುವತಿ ಪೋಷಕರು ಕೆಲಸಕ್ಕೆ ಹೋಗಿದ್ದಾಗ ಇಬ್ಬರು ಜಗಳವಾಡಿದ್ದರು ಎನ್ನಲಾಗಿದೆ. ಸದ್ಯ ಪರಾರಿಯಾಗಿರುವ ಜಗನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹೆಚ್.ಡಿ. ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...