HomeKarnatakaಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಪ್ರಥಮ

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಪ್ರಥಮ

ಯಲಹಂಕ: ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಕ್ಷೇತ್ರ ಪ್ರಥಮ ಸ್ಥಾನದಲ್ಲಿದೆ ಎಂದು ಶಾಸಕ ಎಸ್.ಆರ್. ವಿಶ್ವನಾಥ್ ತಿಳಿಸಿದ್ದಾರೆ.

ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿಯ ಕೇಸರಿ ವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿ, ಬಿಜೆಪಿ ಒಂದು ಪಕ್ಷ ಮಾತ್ರವಲ್ಲ, ಅದು ನಮ್ಮ ಕಾರ್ಯಕರ್ತರಲ್ಲಿ ರಕ್ತಗತವಾದ ಸಿದ್ಧಾಂತವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ರಾಜ್ಯ ಮತ್ತು ದೇಶದಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ನೋಂದಣಿಯ ಮೂಲಕ ಯಲಹಂಕ ಕ್ಷೇತ್ರ ದಾಖಲೆ ಸೃಷ್ಟಿಸಿದೆ. ಪಕ್ಷದಿಂದ ಸದಸ್ಯತ್ವ ಅಭಿಯಾನ ಆರಂಭವಾದ ಹಿನ್ನೆಲೆಯಲ್ಲಿ ಇದುವರೆಗೆ 1.78 ಲಕ್ಷ ಜನ ಸದಸ್ಯರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಷೇತ್ರದ ಕಾರ್ಯಕರ್ತರು ಮುಖಂಡರು 1,78,000 ಸದಸ್ಯರನ್ನು ಗುರುವಾರದವರೆಗೆ ನೋಂದಣಿ ಮಾಡಿಸಿದ್ದಾರೆ. ಅವಧಿ ಪೂರ್ಣಗೊಳ್ಳುವವರೆಗೂ ಸದಸ್ಯತ್ವ ಅಭಿಯಾನ ಭರದಿಂದ ಸಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular