ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿಯವರ ಫೋಟೋ ಬಳಸಿಕೊಂಡು ದುಷ್ಕರ್ಮಿಗಳು ಜಾಲತಾಣದಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಈ ಮೂಲಕ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸಂಸದರ ಗಮನಕ್ಕೆ ಬಂದಿದ್ದು, ಅವರ ವಕೀಲ ಶ್ಯಾಮಸುಂದರ್ ನಾಯರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಸದರ ಹೆಸರನ್ನು ಕೆಡಿಸುವ ಉದ್ದೇಶದಿಂದ ಈ ರೀತಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.