HomeKarnatakaವಿದ್ಯಾರ್ಥಿ ಸಾವು ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು: ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ವಿದ್ಯಾರ್ಥಿ ಸಾವು ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು: ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕಾಲೇಜು ವಿದ್ಯಾರ್ಥಿ ಗೌತಮ್ ಮೃತಪಟ್ಟಿದ್ದ. ಆತನ ಜೊತೆಗಿದ್ದ ಇನ್ನೋರ್ವ ವಿದ್ಯಾರ್ಥಿ ಧನುಷ್ ನನ್ನು ರಕ್ಷಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಮುರುಡೆಶ್ವರದಲ್ಲಿ ಸಮುದ್ರಕ್ಕೆ ಇಳಿಯದಂತೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ವೀಕೆಂಡ್ ಹಾಗೂ ದಸರಾ ರಜೆ ಇರುವುದರಿಂದ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಪೊಲೀಸರು, ಅಧಿಕಾರಿಗಳು ಸೂಚಿಸಿದ್ದಾರೆ. ಇದರಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular