alex Certify ‘ಬಿಗ್ ಬಾಸ್’ ಖ್ಯಾತಿಯ ನಟಿ ಶುಭಶ್ರೀ ಕಾರು ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಗ್ ಬಾಸ್’ ಖ್ಯಾತಿಯ ನಟಿ ಶುಭಶ್ರೀ ಕಾರು ಅಪಘಾತ

ಹೈದರಾಬಾದ್: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಶುಭಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ನಾಗಾರ್ಜುನ ಸಾಗರದ ಮಾಚೆರ್ಲಾ ಬಳಿ ಬೈಕ್ ಸವಾರನೊಬ್ಬ ಮದ್ಯದ ಅಮಲಿನಲ್ಲಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದರೂ ನಟಿಗೆ ಯಾವುದೇ ತೊಂದರೆಯಾಗಿಲ್ಲ.

ಅಪಘಾತದಲ್ಲಿ ಬೈಕ್ ಕೂಡ ಜಖಂಗೊಂಡಿದೆ. ಹೆಲ್ಮೆಟ್ ಹಾಕಿಕೊಂಡಿದ್ದರಿಂದ ಬೈಕ್ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ. ಶುಭಶ್ರೀ ಕೂಡ ಅಪಾಯದಿಂದ ಪಾರಾಗಿದ್ದಾರೆ. ಶುಭಶ್ರೀ ಪ್ರಸ್ತುತ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಚಿತ್ರತಂಡಕ್ಕೆ ಸೇರಿದ್ದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...