HomeIndiaಟಿ20 ಮಹಿಳಾ ವಿಶ್ವಕಪ್: 6 ವಿಕೆಟ್ ಗಳಿಂದ ಪಾಕಿಸ್ತಾನ ಮಣಿಸಿದ ಭಾರತ

ಟಿ20 ಮಹಿಳಾ ವಿಶ್ವಕಪ್: 6 ವಿಕೆಟ್ ಗಳಿಂದ ಪಾಕಿಸ್ತಾನ ಮಣಿಸಿದ ಭಾರತ

ದುಬೈನ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ICC ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 6 ವಿಕೆಟ್ ಗಳಿಂದ ಜಯಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಮಹಿಳಾ ತಂಡ 8 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿದೆ. ಭಾರತ ತಂಡ 18.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 108 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ಭಾರತದ ಪರವಾಗಿ ಶಫಾಲಿ ವರ್ಮಾ 32, ಜೆ. ರೋಡ್ರಿಗಸ್ 23, ಹರ್ಮನ್ ಪ್ರೀತ್ 29 ರನ್ ಗಳಿಸಿದರು. ಅರುಂಧತಿ ರೆಡ್ಡಿ 3, ಶ್ರೇಯಾಂಕಾ ಪಾಟೀಲ್ 2 ವಿಕೆಟ್ ಪಡೆದರು.

ಪಾಕಿಸ್ತಾನ ಪರವಾಗಿ ನಿದಾ ದಾರ್ 28, ಮುನಿ ಬಾ ಅಲಿ ಸಿದ್ದಿಖಿ 17, ಸೈಯಿದಾ ರೂಬ್ ಶಹಾ ಅಜೇಯ 14 ರನ್ ಗಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular