alex Certify ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಎರಡು ದಿನ ಬಾರಿ ಮಳೆ ಆಗುವ ಸಾಧ್ಯತೆಯಿದ್ದು, ಸೋಮವಾರ 7 ಜಿಲ್ಲೆಗಳಿಗೆ, ಮಂಗಳವಾರ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಸೋಮವಾರ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವ ಇದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆ ಆಗುವ ಸಂಭವ ಇದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗುವ ಸಂಭವ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...