HomeKarnatakaBREAKING: ಜನಪದ ಕಲಾವಿದ ಗುರುರಾಜ ಹೊಸಕೋಟಿ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

BREAKING: ಜನಪದ ಕಲಾವಿದ ಗುರುರಾಜ ಹೊಸಕೋಟಿ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

ಬಾಗಲಕೋಟೆ: ಜನಪದ ಕಲಾವಿದ ಗುರುರಾಜ ಹೊಸಕೋಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಕಾರ್ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದಾಗ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular