HomeKarnatakaಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ಅರೆಸ್ಟ್

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ಅರೆಸ್ಟ್

ಚಾಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. ಪುದೂರಿನಿಂದ ದನದ ಮಾಂಸ ತಂದು ಕ್ಷೇತ್ರದ ಕಲ್ಯಾಣ ಮಂಟಪದ ಬಳಿ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. 23 ಕೆಜಿ ದನದ ಮಾಂಸ ಮತ್ತು ಮಾಂಸ ಸಾಗಣೆಗೆ ಬಳಸಿದ್ದ ದ್ವಿಚಕ್ರ ವಾಹನ ವಶ ಪಡೆದುಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ನವೀನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ರಜನಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular