alex Certify BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

ಬಾಗಲಕೋಟೆ: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ.

ಸದ್ಯ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಎದುರಿನಿಂದ ಬಂದ ವಾಹನ ತಪ್ಪಿಸಲು ಹೋಗಿ ಗುರುರಾಜ್ ಹೊಸಕೋಟೆ ಪ್ರಯಾಣಿಸುತ್ತಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ಕಲ್ಲು ಬಂಡೆಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಗುರುರಾಜ್ ಹೊಸಕೋಟೆ ಸಿಂಧನೂರಿನಿದ ಮಹಾಲಿಂಗಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...