ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಶ್ರೀಧರ್ ಪೂಜಾರ್ ಅವರು ಬಂಧಿತರಲ್ಲಿ ಬೆಂಗಳೂರು ಸಿಸಿಬಿಯಲ್ಲಿ ಕಾರ್ಯನಿರ್ವಹಿಸಿದ್ದ ಮೂರನೇ ಅಧಿಕಾರಿಯಾಗಿದ್ದಾರೆ. ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಶ್ರೀಧರ್ ಪೂಜಾರ್ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಲಾಗಿದೆ. ನಂತರ ಅವರನ್ನು ಬಂಧನಕ್ಕೆ ಒಳಪಡಿಸಿದ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
2020ರಲ್ಲಿ ಸಿಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ವೇಳೆ ಡ್ರಗ್ಸ್ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲಾ ಅವರನ್ನು ವಶಕ್ಕೆ ಪಡೆದು ಅಕ್ರಮ ಬಂಧನದಲ್ಲಿಟ್ಟುಕೊಂಡು ಬಿಟ್ ಕಾಯಿನ್ ವರ್ಗಾಯಿಸಿಕೊಂಡ ಆರೋಪ ಶ್ರೀಧರ್ ಪೂಜಾರ್ ಮೇಲಿದೆ.