alex Certify ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತ ಅಧಿಕಾರಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನೌಕರರ ಸಂಘಕ್ಕೆ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಧಾನ ವ್ಯವಸ್ಥಾಪಕ ಸಿ.ಎನ್. ಮಂಜುನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಸಂಘದ ಆಡಳಿತ ಮಂಡಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಂಘದ ಸದಸ್ಯರ ಮತ್ತು ಸಾರ್ವಜನಿಕರ ಹಿತ ದೃಷ್ಟಿಯಿಂದ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...