HomeIndiaಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎಂದ ಕೆ.ಬಿ. ಕೋಳಿವಾಡ

ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎಂದ ಕೆ.ಬಿ. ಕೋಳಿವಾಡ

ಬೆಂಗಳೂರು: ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೋಳಿವಾಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ಆಗಿದೆ ಎಂದರು.

ಇನ್ನು ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ನಿಲುವಿಗೆ ಈಗಲೂ ಬದ್ಧವಾಗಿದ್ದೇನೆ. ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ನಾನು ಹೇಳಿದ್ದೇನೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆಯಾದರೆ ನೊಟೀಸ್ ಕೊಡುತ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಐಸಿಸಿ ನಾಯಕರು ನನಗೆ ಎಚ್ಚರಿಕೆ ನೀಡಲ್ಲ. ನಾನು ಹಿರಿಯ ನಾಯಕ. ನನ್ನ ಅಭಿಪ್ರಾಯ ನಾನು ತಿಳಿಸಿದ್ದೇನೆ ಅಷ್ಟೇ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಪಕ್ಷ ಉಳಿಸುವ ಕೆಲಸ ಮಾಡುತ್ತೇನೆ ಎಂದರು.

 

For Latest News Updates, Join Our Whatsapp Community🚩
RELATED ARTICLES

Most Popular