alex Certify ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಲಾಗಿದ್ದು, 40 ವರ್ಷದೊಳಗಿನ ಯುವಕ/ಯುವತಿಯರಿಂದ ಅರ್ಜಿ ಅಹ್ವಾನಿಸಿದೆ.

ಎಸ್.ಎಸ್.ಎಲ್.ಸಿ ಪಾಸ್/ಫೇಲ್ ಆದವರು ನವಂಬರ್ 07 ರಿಂದ 26ರ ವರೆಗೆ ನಡೆಯುವ 20 ದಿನಗಳ ಹೊಲಿಗೆ ತರಬೇತಿ ಶಿಬಿರಕ್ಕೆ ಮತ್ತು ದ್ವಿತೀಯ ಪಿ.ಯು.ಸಿ ಪಾಸ್/ಫೇಲ್ ಆದವರು ನವಂಬರ್ 15 ರಿಂದ 26 ರ ವರೆಗೆ ನಡೆಯುವ 12 ದಿನಗಳ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಶಿಬಿರದಲ್ಲಿ ಭಾಗವಹಿಸುವ ಯುವಕ ಅಥವಾ ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ ಮತ್ತು ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ಆಸಕ್ತರು ಅರ್ಜಿ ನಮೂನೆಯನ್ನು ನಗರದ ನೆಹರು ಕ್ರೀಡಾಂಗದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನ. 04 ರೊಳಗಾಗಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...